ಸುಂಟಿಕೊಪ್ಪ: ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಸೆವೆಂತ್ ಮೈಲ್‌ನಲ್ಲಿ ಕಳೆದ ಭಾನುವಾರದಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಗ್ರಾಮದ ಸಮೀಪದ ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಸೆವೆಂತ್ ಮೈಲ್ ನಿವಾಸಿ ಪೌಲ್ ಡಿಸೋಜ ಎಂಬವರ ಮೃತದೇಹ ಇಂದು ಬೆಳಗ್ಗೆ ಸೌಭಾಗ್ಯ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಇವರು ನಾಲ್ಕು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದು, ಎಲ್ಲಿಯೂ ಕಂಡುಬಾರದ ಹಿನ್ನೆಲೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಮನೆಯವರು, ಪೊಲೀಸರು ಸೇರಿದಂತೆ ಗ್ರಾಮಸ್ಥರು ಹುಡುಕಾಟ ನಡೆಸುತ್ತಿದ್ದರು.
ಎಲ್ಲಾ ಕಡೆ ಹುಡುಕಾಟ ನಡೆಸಿದ್ದರು. ಆದರೆ ಇಂದು ಕೆರೆಯಲ್ಲಿ ಪೌಲ್ ಡಿಸೋಜರವರ ಮೃತದೇಹ ಪತ್ತೆಯಾಗಿದೆ. ಪತ್ತೆಯಾದ ದೇಹದಲ್ಲಿ ಕಲ್ಲುಗಳನ್ನು ಕಟ್ಟಿಕೊಂಡಿರುವುದು ಗೋಚರಿಸಿದೆ. ಹೀಗಾಗಿ ಇವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.