ವಿದ್ಯಾರ್ಥಿನಿಗೆ ಕಿರುಕುಳ ನೀಡಿ ವಿವಸ್ತ್ರಗೊಳಿಸಿದ ದುಷ್ಕರ್ಮಿಗಳು: ವಿದ್ಯಾರ್ಥಿಗಳಿಂದ ಪ್ರತಿಭಟನೆ

0
92

ಲಕ್ನೋ : ಐಐಟಿ-ಬಿಎಚ್‌ಯು ಕ್ಯಾಂಪಸ್‌ನಲ್ಲಿ ಬುಧವಾರ ತಡರಾತ್ರಿಯಲ್ಲಿ ಪುರುಷ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿನಿಯೊಬ್ಬಳಿಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಪುರುಷರು ಕಿರುಕುಳ ನೀಡಿ ವಿವಸ್ತ್ರಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆ ಖಂಡಿಸಿ ಐಐಟಿ-ಬಿಎಚ್‌ಯುನಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ರಜಪೂತಾನ ಹಾಸ್ಟೆಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಆಪಾದಿತ ಘಟನೆಯ ನಂತರ, ಭದ್ರತಾ ವ್ಯವಸ್ಥೆ ಹೆಚ್ಚಿಸಿದ್ದು ಹೊರಗಿನವರ ಪ್ರವೇಶ ನಿಷೇಧಕ್ಕೆ ಒತ್ತಾಯಿಸಿದರು.

ಮಹಿಳೆ ನೀಡಿದ ದೂರಿನ ಪ್ರಕಾರ, ಬುಧವಾರ ರಾತ್ರಿ ಸ್ನೇಹಿತನ ಜೊತೆ ಹೊರಗೆ ಹೋಗಿದ್ದಳು. ಅವರು ಕರ್ಮಾನ್ ಬಾಬಾ ದೇವಸ್ಥಾನದ ಬಳಿ ಇದ್ದಾಗ ಮೂವರು ಪುರುಷರು ಮೋಟಾರ್ ಸೈಕಲ್‌ನಲ್ಲಿ ಬಂದು ಅವಳನ್ನು ಬಲವಂತವಾಗಿ ಎಳೆದು ಮೂಲೆಗೆ ಕರೆದೊಯ್ದು ಆಕೆಯ ಬಾಯಿ ಮುಚ್ಚಿಸಿದ್ದಾರೆ. ನಂತರ ವ್ಯಕ್ತಿಯೊಬ್ಬ ಆಕೆಯನ್ನು ವಿವಸ್ತ್ರ ಮಾಡಿ ವಿಡಿಯೊ, ಫೋಟೋ ಕ್ಲಿಕ್ಕಿಸಿದ್ದಾನೆ. ಅವರು 15 ನಿಮಿಷಗಳ ನಂತರ ಆಕೆಯ ಫೋನ್ ನಂಬರ್ ತೆಗೆದುಕೊಂಡು ಆಕೆಯನ್ನು ಹೋಗಲು ಬಿಟ್ಟರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.

BHU ನಲ್ಲಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಘಟಕದ ಕಾರ್ಯದರ್ಶಿ ಅಭಯ್ ಸಿಂಗ್, ಅದರ ಸದಸ್ಯರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಮತ್ತು ಆರೋಪಿಗಳನ್ನು ಶೀಘ್ರವಾಗಿ ಗುರುತಿಸಲು ಮತ್ತು ಅವರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಜಾರಿಗೊಳಿಸಲು ಕರೆ ನೀಡಿದರು.

LEAVE A REPLY

Please enter your comment!
Please enter your name here