ಲಕ್ನೋ : ಐಐಟಿ-ಬಿಎಚ್‌ಯು ಕ್ಯಾಂಪಸ್‌ನಲ್ಲಿ ಬುಧವಾರ ತಡರಾತ್ರಿಯಲ್ಲಿ ಪುರುಷ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿನಿಯೊಬ್ಬಳಿಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಪುರುಷರು ಕಿರುಕುಳ ನೀಡಿ ವಿವಸ್ತ್ರಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆ ಖಂಡಿಸಿ ಐಐಟಿ-ಬಿಎಚ್‌ಯುನಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ರಜಪೂತಾನ ಹಾಸ್ಟೆಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಆಪಾದಿತ ಘಟನೆಯ ನಂತರ, ಭದ್ರತಾ ವ್ಯವಸ್ಥೆ ಹೆಚ್ಚಿಸಿದ್ದು ಹೊರಗಿನವರ ಪ್ರವೇಶ ನಿಷೇಧಕ್ಕೆ ಒತ್ತಾಯಿಸಿದರು.
ಮಹಿಳೆ ನೀಡಿದ ದೂರಿನ ಪ್ರಕಾರ, ಬುಧವಾರ ರಾತ್ರಿ ಸ್ನೇಹಿತನ ಜೊತೆ ಹೊರಗೆ ಹೋಗಿದ್ದಳು. ಅವರು ಕರ್ಮಾನ್ ಬಾಬಾ ದೇವಸ್ಥಾನದ ಬಳಿ ಇದ್ದಾಗ ಮೂವರು ಪುರುಷರು ಮೋಟಾರ್ ಸೈಕಲ್‌ನಲ್ಲಿ ಬಂದು ಅವಳನ್ನು ಬಲವಂತವಾಗಿ ಎಳೆದು ಮೂಲೆಗೆ ಕರೆದೊಯ್ದು ಆಕೆಯ ಬಾಯಿ ಮುಚ್ಚಿಸಿದ್ದಾರೆ. ನಂತರ ವ್ಯಕ್ತಿಯೊಬ್ಬ ಆಕೆಯನ್ನು ವಿವಸ್ತ್ರ ಮಾಡಿ ವಿಡಿಯೊ, ಫೋಟೋ ಕ್ಲಿಕ್ಕಿಸಿದ್ದಾನೆ. ಅವರು 15 ನಿಮಿಷಗಳ ನಂತರ ಆಕೆಯ ಫೋನ್ ನಂಬರ್ ತೆಗೆದುಕೊಂಡು ಆಕೆಯನ್ನು ಹೋಗಲು ಬಿಟ್ಟರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
BHU ನಲ್ಲಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಘಟಕದ ಕಾರ್ಯದರ್ಶಿ ಅಭಯ್ ಸಿಂಗ್, ಅದರ ಸದಸ್ಯರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಮತ್ತು ಆರೋಪಿಗಳನ್ನು ಶೀಘ್ರವಾಗಿ ಗುರುತಿಸಲು ಮತ್ತು ಅವರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಜಾರಿಗೊಳಿಸಲು ಕರೆ ನೀಡಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…