ಮಸೂದ್ ಕೊಲೆ ಪ್ರಕರಣ ದಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್

0
66

ಮಂಗಳೂರು : 2022ರ ಜುಲೈಯಲ್ಲಿ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಹತ್ಯೆಯಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

Advertisement
Advertisement
Advertisement

ಎಂಟು ಆರೋಪಿಗಳ ಪೈಕಿ ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು.ಅಭಿಲಾಷ್ ಮತ್ತು ಸುನಿಲ್ ಎಂಬವರಿಗೆ ಈಗ ಜಾಮೀನು ಲಭಿಸಿದೆ.

ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯ ಏಕಸದಸ್ಯ ಪೀಠದ ಜಸ್ಟೀಸ್ ವಿಶ್ವಜಿತ್ ಎಸ್ ಶೆಟ್ಟಿ, ಒಂದು ವರ್ಷದ ಮೇಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆಂಬ ವಾದಕ್ಕೆ ಪುರಸ್ಕರಿಸಿದ್ದಾರೆ. ಆರೋಪಿಗಳ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿಸಿದ್ದರು.

LEAVE A REPLY

Please enter your comment!
Please enter your name here