ಕರಾವಳಿ

ರಾಜ್ಯದಲ್ಲಿ ಜಿಕಾ ವೈರಸ್‌ ಪತ್ತೆ: ದ.ಕ., ಉಡುಪಿ ಜಿಲ್ಲೆಗಳಲ್ಲಿ ವಿಶೇಷ ನಿಗಾ

ಮಂಗಳೂರು/ಉಡುಪಿ: ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಅಪಾಯಕಾರಿ ಜಿಕಾ ವೈರಸ್‌ ಪತ್ತೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವಿಶೇಷ ನಿಗಾ ಇಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

Advertisement
Advertisement
Advertisement

ಜಿಕಾ ವೈರಸ್‌ ರೋಗದ ಲಕ್ಷಣವಿರುವ ಪ್ರಕರಣ ಕಂಡುಬಂದರೆ ಕೂಡಲೇ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಲು ಎಲ್ಲ ಪ್ರಾಥಮಿಕ, ಸಮುದಾಯ, ತಾಲೂಕು ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ.

ಜಿಕಾ ಲಕ್ಷಣ ಡೆಂಗ್ಯೂ ಲಕ್ಷಣವೇ ಇರುವ ಕಾರಣ ಲಾರ್ವಾ ನಾಶಕ್ಕೆ ಆರೋಗ್ಯ ಇಲಾಖೆ ಈಗಾಗಲೇ ನಿರ್ಧರಿಸಿದೆ. ಮಂಗಳೂರು ಪಾಲಿಕೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಾಗುತ್ತಿದ್ದು, ಸದ್ಯ 393 ಪ್ರಕರಣಗಳಿವೆ. ಡೆಂಗ್ಯೂ ಸೊಳ್ಳೆ ನಿಯಂತ್ರಣಕ್ಕೆ ಸದ್ಯ ಫಾಗಿಂಗ್‌, ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ. ಇದನ್ನು ಮತ್ತಷ್ಟು ಪರಿಣಾಮ ಕಾರಿಯಾಗಿಸಲು ನಿರ್ಧರಿಸಲಾಗಿದೆ. ಜಿಕಾ ಮಾರಣಾಂತಿಕ ಕಾಯಿಲೆಯ ಲ್ಲದಿದ್ದರೂ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸಬೇಕು. ಗರ್ಭಿಣಿಯರು ಹೆಚ್ಚಿನ ನಿಗಾ ವಹಿಸಬೇಕು.

ದ.ಕ. ಮತ್ತು ಉಡುಪಿ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾ ಧಿಕಾರಿಗಳಾದ ಡಾ| ನವೀನ್‌ ಚಂದ್ರ ಕುಲಾಲ್‌ ಮತ್ತು ಡಾ| ಪ್ರಶಾಂತ ಭಟ್‌ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ಜಿಕಾ ವೈರಸ್‌ ನಿಟ್ಟಿನಲ್ಲಿ ಜಿಲ್ಲೆಯಲ್ಲೂ ನಿಗಾ ಇರಿಸಲಾಗಿದೆ. ಈ ರೋಗಕ್ಕೆ ತುತ್ತಾದವರಲ್ಲಿ ಕೆಂಗಣ್ಣು, ತಲೆನೋವು, ಜ್ವರ, ತುರಿಕೆ, ಕೀಲು ನೋವು ಇರುತ್ತದೆ. 2ರಿಂದ 7 ದಿನಗಳೊಳಗೆ ರೋಗ ತೀವ್ರತೆ ಪಡೆದುಕೊಳ್ಳುತ್ತದೆ. ಜಿಲ್ಲೆಯಲ್ಲಿ ಸದ್ಯ ಅಂತಹ ಯಾವುದೇ ಪ್ರಕರಣಗಳಿಲ್ಲ.ಆದರೂ ಪ್ರತಿಯೊಬ್ಬರೂ ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರದಿಂದ ಇರಬೇಕು. ರೋಗ ಲಕ್ಷಣ ಕಂಡುಬಂದರೆ ವೈದ್ಯರನ್ನು ಭೇಟಿಯಾಗಿ’ ಎಂದು ತಿಳಿಸಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago