ಮಂಗಳೂರು : ಪ್ರೀತಿಸುತ್ತಿದ್ದ ಹುಡುಗಿ ತನ್ನ ಜತೆಗೆ ಸುತ್ತಾಡಲು ಬಂದಿಲ್ಲವೆಂದು ಯುವಕನೊಬ್ಬ ಆಕೆ ಕೆಲಸ ಮಾಡುತ್ತಿದ್ದ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ಮಂಗಳೂರಿನ ಬೆಂದೂರು ಬಳಿ ನಡೆದಿದೆ .
ಸುಳ್ಯ ನಿವಾಸಿ ಲೈಟಿಂಗ್ ಕೆಲಸ ಮಾಡುತ್ತಿದ್ದ ವಿವೇಕ್ (18) ಎಂಬಾತ ಬೆಂದೂರು ಬಳಿ ಪಿಜಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದ. ಹೀಗಾಗಿ ಗುರುವಾರ ಸಂಜೆ ಆಕೆ ಕೆಲಸ ಮಾಡುತ್ತಿದ್ದ ಸ್ಥಳದ ಬಳಿ ಬಂದು ಔಟಿಂಗ್ಗೆ ಬರುವಂತೆ ಕರೆ ಮಾಡಿದ್ದಾನೆ. ಆದರೆ, ಯುವತಿ ಆತನೊಂದಿಗೆ ಸುತ್ತಾಟಕ್ಕೆ ಬರಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಪ್ರಿಯಕರ ವಿವೇಕ್, ಆಕೆ ಕೆಲಸ ಮಾಡುತ್ತಿದ್ದ ಪಿಜಿಗೆ ಕಲ್ಲು ಎಸೆದಿದ್ದಾನೆ.
ಕಲ್ಲೆಸೆತದಿಂದ ಕಟ್ಟಡದ ಗಾಜು ಪುಡಿಯಾಗಿದ್ದರಿಂದ ಸಾರ್ವಜನಿಕರು ಯುವಕನಿಗೆ ಧರ್ಮದೇಟು ನೀಡಿದ್ದಾರೆ ಎಂದು ತಿಳಿದುಬಂದಿದೆ.