ಸುಳ್ಯ : ಅರಂತೋಡು ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ ಕಾರು ಅರಂತೋಡು ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಜಖಂಗೊಂಡಿದೆ.
ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.