ಇರಾನ್ ನ ಮಾದಕವಸ್ತುಗಳ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಅವಘಡ

By: Ommnews

Date:

Share post:

ಇರಾನ್: ಉತ್ತರ ಇರಾನ್‌ನಲ್ಲಿರುವ ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.

Advertisement
Advertisement
Advertisement

ರಾಜಧಾನಿ ಟೆಹ್ರಾನ್‌ನ ವಾಯುವ್ಯಕ್ಕೆ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಲ್ಯಾಂಗ್‌ರೌಡ್ ನಗರದಲ್ಲಿ ಈ ಅವಘಡ ಸಂಭವಿಸಿದ್ದು, ಕನಿಷ್ಠ ಹದಿನೇಳು ಮಂದಿ ಗಾಯಗೊಂಡಿದ್ದಾರೆ.ಇಂದು ಮುಂಜಾನೆ ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬಾರೀ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದೆ.

ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳವು ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ.ಈ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತಾಗಿ ತನಿಖೆ ನಡೆಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Share post:

LEAVE A REPLY

Please enter your comment!
Please enter your name here