ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯುನೆಲೆಯ ಮೇಲೆ ಶನಿವಾರ ಬಹು ಆತ್ಮಹತ್ಯಾ ಬಾಂಬರ್‌ಗಳು ದಾಳಿ ನಡೆಸಿದ್ದಾರೆ.
ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಶನಿವಾರ ಬೆಳಿಗ್ಗೆ ಮಿಯಾನ್‌ವಾಲಿ ತರಬೇತಿ ವಾಯುನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪಾಕಿಸ್ತಾನ ವಾಯು ಪಡೆ ತಿಳಿಸಿದೆ.
ಶನಿವಾರ ನಡೆದ ಉಗ್ರರ ದಾಳಿಯು ವಿಫಲವಾಗಿದೆ. ಇದಕ್ಕೆ ಪರಿಣಾಮಕಾರಿ ಪ್ರತಿಕ್ರಿಯೆ ನೀಡಿರುವ ಸೇನೆ, ಉಗ್ರರ ದಾಳಿಯನ್ನು ತಡೆದು ಆಸ್ತಿ ಮತ್ತು ಸೇನೆಯ ಸುರಕ್ಷತೆ ಬಗ್ಗೆ ಖಾತ್ರಿಪಡಿಸಿದೆ. ಪಾಕ್ ಸೇನೆಯು ಅಸಾಧಾರಣ ಪ್ರತಿಭೆ ಪ್ರದರ್ಶಿಸುವ ಮೂಲಕ ಮೂವರು ಉಗ್ರರನ್ನು ವಾಯುನೆಲೆ ಪ್ರವೇಶಿಸುವುದಕ್ಕೂ ಮುನ್ನವೇ ಹೊಡೆದುರುಳಿಸಲಾಗಿದೆ. ಉಳಿದ ಮೂವರು ಉಗ್ರರನ್ನು ಪ್ರತ್ಯೇಕಗೊಳಿಸಲಾಗಿದೆ ಎಂದು ತಿಳಿಸಿದೆ.
ಆತ್ಮಹತ್ಯಾ ಬಾಂಬರ್‌ಗಳ ದಾಳಿಯಲ್ಲಿ ವಾಯುನೆಲೆಯಲ್ಲಿ ನಿಲ್ಲಿಸಲಾಗಿದ್ದ ಮೂರು ಯುದ್ಧ ವಿಮಾನಗಳು ಹಾನಿಯಾಗಿವೆ. ಕೆಲ ಇಂಧನ ಟ್ಯಾಂಕರ್‌ಗಳು ಕೂಡ ಸುಟ್ಟು ಭಸ್ಮವಾಗಿವೆ ಎಂದು ಸೇನೆ ಹೇಳಿಕೊಂಡಿದೆ. ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಯು ಈ ದಾಳಿ ಹೊಣೆ ಹೊತ್ತುಕೊಂಡಿದೆ.