ಎಲ್ಲಾ ಜಿಲ್ಲಾ ಮಂತ್ರಿಗಳಿಗೆ ಬರ ಪರಿಸ್ಥಿತಿಯ ಅಧ್ಯಯನ ಮಾಡಿ ವರದಿ ನೀಡುವಂತೆ ಸಿಎಂ ಪತ್ರ

By: Ommnews

Date:

Share post:

ಮೈಸೂರು: ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯ ಅಧ್ಯಯನ ಹಾಗೂ ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement
Advertisement
Advertisement

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದು ಹೇಳಿದರು.

ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಶನಿವಾರ ಬಿಡುಗಡೆ ಮಾಡಿದ್ದಾರೆ. 33 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ಕಳುಹಿಸಲಾಗಿತ್ತು. ಮೂವರಿಗೂ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರು ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದರು.

ಭೇಟಿಗೆ ಅವಕಾಶ ನೀಡದಿರುವುದು ಕೇಂದ್ರಕ್ಕೆ ಕರ್ನಾಟಕದ ಬಗ್ಗೆ ಇರುವ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನು ಕೇಂದ್ರ ಸರ್ಕಾರ ತೋರಿದೆ.

ಪರಿಹಾರಕ್ಕಾಗಿ ಒತ್ತಾಯ ಮಾಡಲು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಪುನಃ ಪತ್ರ ಬರೆಯಲಾಗಿದೆ ಎಂದು ನುಡಿದರು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section