ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯ ಕೌಕ್ರಾಡಿಯಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿಯೊರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಕೌಕ್ರಾಡಿ ನಿವಾಸಿಯಾಗಿರುವ ಶಾಂತಿ ಬೆಟ್ಟು ನಿವಾಸಿ ಯೂಸುಫ್ ಅವರ ಪುತ್ರ ಮಹಮ್ಮದ್ ಇರ್ಫಾನ್ (18) ಹೃದಯಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಯುವಕನಾಗಿದ್ದಾನೆ.
ಮೃತ ಇರ್ಫಾನ್ ಪುತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಎ.ಸಿ ಮೆಕ್ಯಾನಿಕ್ ವ್ಯಾಸಂಗವನ್ನು ಮಾಡುತ್ತಿದ್ದರು.
ಇವರು ತಂದೆ,ತಾಯಿ ಸಹೋದರರು ಮತ್ತು ಸಹೋದರಿಯರನ್ನು ಅಗಲಿದ್ದಾರೆ.