ಪುತ್ತೂರು: ಪಡುವನ್ನೂರು ಗ್ರಾಮದ ಪದಡ್ಕದ ನಿವಾಸಿ ಪುಷ್ಪಾ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನ.7 ರಂದು ನಡೆದಿದೆ.
ಪುಷ್ಪಾ ಅವರಿಗೆ ಬೆಳಗ್ಗೆ 4 ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಪುಷ್ಪಾ ಅವರು ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.