ಮಂಗಳೂರು: ಬೆಂಗಳೂರಿನಿಂದ -ಕರಾವಳಿಗೆ “ವಂದೇ ಭಾರತ್” ರೈಲು ಸೇವೆಯನ್ನು ವಿಸ್ತರಿಸಬೇಕೆಂಬುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ನಳಿನ್ x ಖಾತೆಯಲ್ಲಿ ” ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಕಾಸರಗೋಡು – ತಿರುವನಂತಪುರಂ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲು ಒತ್ತಾಯ ಕೇಳಿಬಂದಿತ್ತು. ಅಲ್ಲದೇ ರೈಲ್ವೆ ಇಲಾಖೆಯ ಮುಂದೆ ಮಂಗಳೂರು-ಮಡಗಾಂವ್, ಮಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುವ ಪ್ರಸ್ತಾವನೆ ಇತ್ತು.
ಆದರೆ ಈಗ ಸಂಸದರು ಮಾಡಿರುವ ಟ್ವೀಟ್ ಅನ್ವಯ ಮಡಗಾಂವ್-ಮಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು ಸಂಚಾರ ಶೀಘ್ರವೇ ಆರಂಭವಾಗಲಿದೆ. ಜೊತೆಗೆ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಿಸಬೇಕು ಎಂಬ ಕರಾವಳಿ ಭಾಗದ ಜನರು ಬೇಡಿಕೆಯೂ ಇಡೇರುವ ಲಕ್ಷಣ ಗೋಚರಿಸುತ್ತಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…