ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನಕ್ಕೊಳಗಾಗಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ವಲಯದಿಂದ ತಿಳಿದುಬಂದಿದೆ.
ಕೇಶವ ಪಡೀಲ್ ರನ್ನು ಕೊಲೆ ಪ್ರಕರಣದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ. ಹೀಗಾಗಿ ಅವರನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ.
ಕೊಲೆ ಆರೋಪ ಬಂದಿರುವ ಕಾರಣ ತಕ್ಷಣವೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ವಿಷಯ ತಿಳಿಸಿ ಎಸ್.ಸಿ. ಘಟಕದ ಅಧ್ಯಕ್ಷ ಹುದ್ದೆಯಿಂದ ತೆರವು ಮಾಡಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ.