ಪುತ್ತೂರು: ಪುತ್ತೂರಿನಲ್ಲಿ ಬೃಹದ್ ಆಕಾರದ ಮರವೊಂದು ಧರೆಗೆ ಉರುಳಿ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಪರ್ಲಡ್ಕ ಕಲ್ಲಿಮಾರ್ ಬಳಿ ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ಮರ ಬಿದ್ದ ಪರಿಣಾಮ ಪರ್ಲಡ್ಕ ಕಲ್ಲಿಮಾರ್ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.ಈ ವೇಳೆ ಇದೇ ರಸ್ತೆಯಾಗಿ ಸಂಚರಿಸುತ್ತಿದ್ದ ಪ್ರಯಾಣಿಕರೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.