ಕರ್ನಾಟಕ ಬ್ಯಾಂಕ್ ಹಿರಿಯ ಅಧಿಕಾರಿ ಚೂರಿಯಿಂದ ಇರಿದುಕೊಂಡು ಆತ್ಮಹತ್ಯೆ

0
92

ಮಂಗಳೂರು: ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿ ವಾದಿರಾಜ್ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ವಾದಿರಾಜ್ ಅವರಿಗೆ ಪತ್ನಿ, ಹಾಗೂ ಇಬ್ಬರು ಮಕ್ಕಳಿದ್ದು ಬೆಳಿಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದು ಪತ್ನಿ ಕೂಡಾ ಮನೆಯಲ್ಲಿ ಇರದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here