ಪುತ್ತೂರು: ನ.13 ರಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ವಸ್ತ್ರ ವಿತರಣೆ ಹಾಗೂ ಸಹಭೋಜನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಸೇರುವ ನಿರೀಕ್ಷೆ ಇದ್ದು ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಸಬ್ ಇನ್ಸ್ ಪೆಕ್ಟರ್ ಉದಯ ರವಿ ಅವರು ಕ್ರೀಡಾಂಗಣಕ್ಕೆ ಭೇಟಿ ನೀಡಿ ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿಯವರಿಂದ ಮಾಹಿತಿ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಐವತ್ತು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಟ್ರಾಫಿಕ್ ಜಾಮ್ ಆಗುವ ಸಂಭವ ಇದೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸುದೇಶ್ ಶೆಟ್ಟಿಯವರು ಮನವಿ ಮಾಡಿದರು.