ಚೆನ್ನೈ: ಶನಿವಾರ ಮುಂಜಾನೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಚೆಟ್ಟಿಯಪ್ಪನೂರಿನಲ್ಲಿ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿಬಸ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಘಟನೆಯಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಮಾರು 10 ಅಂಬುಲೆನ್ಸ್‌ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ತಲುಪಿಸಲು ಸಹಾಯ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್‌ಇಟಿಸಿ ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25) ಸ್ಥಳದಲ್ಲೇ ಮೃತಪಟ್ಟರೆ, ಓಮ್ನಿಬಸ್ ಚಾಲಕ ಎನ್ ಸೈಯದ್ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಎಸ್‌ಇಟಿಸಿ ಬಸ್ ಮೀಡಿಯನ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಓಮ್ನಿಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…