ಕ್ರೀಡಾ ಸುದ್ದಿ

ಇಂಗ್ಲೆಂಡ್‌ಗೆ ಪಾಕಿಸ್ತಾನದ ವಿರುದ್ಧ 93 ರನ್‌ಗಳ ಭರ್ಜರಿ ಜಯ

ಕೋಲ್ಕತ್ತಾ: ಇಂಗ್ಲೆಂಡ್‌ ತಂಡ ಪಾಕಿಸ್ತಾನದ ವಿರುದ್ಧ 93 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

Advertisement
Advertisement
Advertisement

ಕೋಲ್ಕತ್ತಾ ಈಡನ್‌ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ತಂಡ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 337 ರನ್‌ ಗಳಿಸಿತ್ತು. 338 ರನ್‌ಗಳ ಗುರಿ ಬೆನ್ನತ್ತಿದ್ದ ಪಾಕ್‌ ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 43.3 ಓವರ್‌ಗಳಲ್ಲಿ 244 ರನ್‌ಗಳಿಸಿ ಸರ್ವಪತನ ಕಂಡಿತು.

ಪಾಕ್‌ ಆರಂಭದಲ್ಲೇ 10 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡಿತ್ತು. ಆದ್ರೆ 3ನೇ ವಿಕೆಟ್‌ಗೆ ಬಾಬರ್‌ ಆಜಂ ಮತ್ತು ಮೊಹಮ್ಮದ್‌ ರಿಜ್ವಾನ್‌ ಜೋಡಿ 68 ಎಸೆತಗಳಲ್ಲಿ 51 ರನ್‌ಗಳ ಜೊತೆಯಾಟ ನೀಡಿದರೂ ಪ್ರಯೋಜನವಾಗಲಿಲ್ಲ. ಈ ಜೋಡಿ ಔಟಾಗುತ್ತಿದ್ದಂತೆ ತಂಡದ ಪತನ ಆರಂಭವಾಯಿತು. ಕಳಪೆ ಬೌಲಿಂಗ್‌ ಹಾಗೂ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ನೀರಸ ಪ್ರದರ್ಶನದಿಂದ ಪಾಕ್‌ ಹೀನಾಯ ಸೋಲನುಭವಿಸಿತು.

ಪಾಕ್‌ ಪರ ಅಬ್ದುಲ್ಲಾ ಶಫೀಕ್‌ ಶೂನ್ಯ ಸುತ್ತಿದ್ದರೆ, ಆಘಾ ಸಲ್ಮಾನ್ 51 ರನ್‌ (45 ಎಸೆತ, 6 ಬೌಂಡರಿ, 1 ಸಿಕ್ಸರ್)‌, ಫಖರ್‌ ಝಮಾನ್‌ 1 ರನ್‌, ಬಾಬರ್‌ ಆಜಂ 38 ರನ್‌ (45 ಎಸೆತ, 6 ಬೌಂಡರಿ), ಮೊಹಮ್ಮದ್‌ ರಿಜ್ವಾನ್‌ 36 (51 ರನ್‌, 2 ಬೌಂಡರಿ), ಸೌದ್‌ ಶಕೀಲ್‌ 29 ರನ್‌, ಇಫ್ತಿಕಾರ್‌ ಅಹ್ಮದ್‌ 3 ರನ್‌, ಶಾದಾಬ್‌ ಖಾನ್‌ 3 ರನ್‌, ಶಾಹೀನ್‌ ಶಾ ಅಫ್ರಿದಿ 25 ರನ್‌ ಗಳಿಸಿದರೆ, ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್‌ ಮಾಡಿದ ಹ್ಯಾರಿಸ್‌ ರೌಫ್‌ 23 ಎಸೆತಗಳಲ್ಲಿ 35 ರನ್‌ (3 ಸಿಕ್ಸರ್‌, 3 ಬೌಂಡರಿ) ಗಳಿಸಿದ್ರೆ, ಮೊಹಮ್ಮದ್‌ ವಸೀಮ್‌ 16 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.

ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಇಂಗ್ಲೆಂಡ್‌ ತಂಡ, ಕೊನೆಯ ಪಂದ್ಯದಲ್ಲಿ ಸ್ಪೋಟಕ ಇನ್ನಿಂಗ್ಸ್‌ ಆರಂಭಿಸಿತ್ತು. ಮೊದಲ ವಿಕೆಟ್‌ಗೆ ಡೇವಿಡ್‌ ಮಲಾನ್‌ ಹಾಗೂ ಜಾನಿ ಬೈರ್ಸ್ಟೋವ್‌ ಜೋಡಿ 13.3 ಓವರ್‌ಗಳಲ್ಲಿ 82 ರನ್‌ಗಳ ಜೊತೆಯಾಟ ನೀಡಿತ್ತು. ಅಲ್ಲದೇ 3ನೇ ವಿಕೆಟ್‌ಗೆ ಬೆನ್‌ಸ್ಟೋಕ್ಸ್‌ ಮತ್ತು ಜೋ ರೂಟ್‌ 131 ಎಸೆತಗಳಲ್ಲಿ 132 ರನ್‌ಗಳ ಜೊತೆಯಾಟ ನೀಡುವ ಮೂಲಕ ಇನ್ನಿಂಗ್ಸ್‌ ಕಟ್ಟಿದರು. ಇದರಿಂದ ತಂಡದ ಮೊತ್ತ 300ರ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ 9 ವಿಕೆಟ್‌ ನಷ್ಟಕ್ಕೆ 337 ರನ್‌ ಗಳಿಸಿತು.

ಇಂಗ್ಲೆಂಡ್‌ ಪರ ಡೇವಿಡ್‌ ಮಲಾನ್‌ 31 ರನ್‌, ಜಾನಿ ಬೈರ್ಸ್ಟೋವ್ 59 ರನ್‌ (61 ಎಸೆತ, 81 ರನ್‌, 7 ಬೌಂಡರಿ, 1 ಸಿಕ್ಸರ್‌), ಜೋ ರೂಟ್‌ 60 ರನ್‌ (72 ಎಸೆತ, 4 ಬೌಂಡರಿ), ಬೆನ್‌ ಸ್ಟೋಕ್ಸ್‌ 84 ರನ್‌ (76 ರನ್‌, 11 ಬೌಂಡರಿ, 2 ಸಿಕ್ಸರ್‌), ಜೋಸ್‌ ಬಟ್ಲರ್‌ 27 ರನ್‌, ಹ್ಯಾರಿ ಬ್ರೂಕ್‌ 30 ರನ್‌ (17 ಎಸೆತ, 2 ಸಿಕ್ಸರ್‌, 2 ಬೌಂಡರಿ, ಮೊಯಿನ್‌ ಅಲಿ 8 ರನ್‌, ಡೇವಿಡ್‌ ವಿಲ್ಲಿ 15 ರನ್‌ ಬಾರಿಸಿದ್ರೆ, ಗಸ್ ಅಟ್ಕಿನ್ಸನ್ ಶೂನ್ಯ ಸುತ್ತಿದ್ದರು. ಕ್ರಿಸ್‌ವೋಕ್ಸ್‌ 4 ರನ್‌ ಮತ್ತು ಆದಿಕ್‌ ರಶೀದ್‌ ಯಾವುದೇ ರನ್‌ ಗಳಿಸಿದೇ ಅಜೇಯಾಗುಳಿದರು.

ಪಾಕಿಸ್ತಾನ ಪರ ಹ್ಯಾರಿಸ್‌ ರೌಫ್‌ 3 ವಿಕೆಟ್‌, ಶಾಹೀನ್‌ ಶಾ ಅಫ್ರಿದಿ ಮತ್ತು ಮೊಹಮ್ಮದ್‌ ವಸೀಮ್‌ ತಲಾ 2 ವಿಕೆಟ್‌, ಇಫ್ತಿಕಾರ್‌ ಅಹ್ಮದ್‌ 1 ವಿಕೆಟ್‌ ಪಡೆದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago