ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಹತ್ಯೆಯಾದವರನ್ನು ತಾಯಿ ಹಸೀನಾ, ಅಫ್ನಾನ್ (23), ಅಯ್ನಾಝ್ (21), ಅಸೀಮ್ (14) ಎಂದು ಗುರುತಿಸಲಾಗಿದೆ.
ಮನೆಯೊಳಗಿದ್ದ ಮತ್ತೋರ್ವ ವ್ಯಕ್ತಿ ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಕೃತ್ಯ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ.