ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರದ ರಾಮೇಶ್ವರ ಸಮೀಪದ ಡಾಬಾ ಒಂದರ ಬಳಿ ಫೋಟೋ ಶೂಟ್ ವೇಳೆ ಕಿಡಿಗೇಡಿಗಳು ಯುವಕನೊರ್ವನನ್ನ ಚಾಕು ಹಾಗೂ ಕೀ ಚೈನ್‍ನಿಂದ ಇರಿದು ಕೊಂದ ಘಟನೆ ನಡೆದಿದೆ.
ಕಚೇರಿಪಾಳ್ಯದ ನಿವಾಸಿ ಸೂರ್ಯ (22) ಹತ್ಯೆಗೀಡಾದ ದುರ್ದೈವಿ. ಹತ್ಯೆಗೀಡಾದ ಯುವಕ ಹಾಗೂ ಆತನ ಸ್ನೇಹಿತರು ಹಬ್ಬದ ಸಲುವಾಗಿ ಸಿಂಗರಿಸಿದ್ದ ಡಾಬಾದ ಮುಂದೆ ಫೋಟೋ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಬಂದ ಯುವಕರ ತಂಡ ತಮ್ಮ ಫೊಟೋ ತೆಗೆಯುವಂತೆ ಹೇಳಿದೆ. ಬಳಿಕ ಅವರಿಂದ ಕ್ಯಾಮೆರಾ ಕಿತ್ತುಕೊಂಡು ಗಲಾಟೆ ಮಾಡಿದ್ದಾರೆ. ಈ ವೇಳೆ ಚಾಕು ಹಾಗೂ ಕೀ ಚೈನ್ ಬಳಸಿ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ.
ಕೂಡಲೇ ಕುಸಿದು ಬಿದ್ದ ಯುವಕ ಸೂರ್ಯನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆಯಾದೆ. ಈ ವೇಳೆ ತೀವ್ರ ರಕ್ತಸ್ರಾವದಿಂದ ಆತ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಹತ್ಯೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.
ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…