ಉಡುಪಿ : ಉಡುಪಿ ಜಿಲ್ಲೆಯ ಗಂಗೊಳ್ಳಿಯ ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ಎಂಟು ಮೀನುಗಾರಿಕಾ ದೋಣಿಗಳು ಸೋಮವಾರ ಬೆಳಗಿನ ಜಾವ ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿಗೆ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ದೀಪಾವಳಿ ಹಬ್ಬದ ಅಂಗವಾಗಿ ಸಿಡಿಸಿದ ಪಟಾಕಿ ಕಿಡಿ ದೋಣಿಯ ಮೇಲೆ ಬಿದ್ದಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಇತರ ಮೂಲಗಳು ತಿಳಿಸಿವೆ.
ಒಂದು ದೋಣಿಯಲ್ಲಿ ಮೊದಲಿಗೆ ಕಾಣಿಸಿಕೊಂಡ ಬೆಂಕಿಯು ಸ್ವಲ್ಪ ಸಮಯದಲ್ಲಿಯೇ ಲಂಗರು ಹಾಕಲಾಗಿದ್ದ ಇತರ ದೋಣಿಗಳಿಗೂ ಹರಡಿತು.
ಕುಂದಾಪುರ ಮತ್ತು ಬೈಂದೂರಿನಿಂದ ಆಗಮಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಕರಾವಳಿ ಕಾವಲು ಸಿಬ್ಬಂದಿ ಮತ್ತು ಪೊಲೀಸರು ಸಹ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ಅವಘಡದಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…