ಕರಾಚಿ: ಭಾರತದಲ್ಲಿ ಉಗ್ರ ಕೃತ್ಯಕ್ಕೆ ನಡೆಸಲು ಪ್ರೋತ್ಸಾಹ ನೀಡುತ್ತಿದ್ದ ಜೈಶ್ ಉಗ್ರ ಮೌಲಾನಾ ರಹೀಂ ಉಲ್ಲಾ ತಾರೀಖ್ ಕರಾಚಿಯ ಒರಂಗಿ ಪಟ್ಟಣ ಪ್ರದೇಶದಲ್ಲಿ ಅಪರಿಚಿತರ ಗುಂಡೇಟಿಗೆ ಬಲಿಯಾಗಿದ್ದಾನೆ.
ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮಸೂದ್ ಅಜರ್‌ನ ಆಪ್ತನಾಗಿದ್ದ ತಾರೀಖ್ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಯುವಕರನ್ನು ನೇಮಿಸುತ್ತಿದ್ದ.
ಮಸೀದಿಗೆ ಪ್ರಾರ್ಥನೆ ತೆರಳುವಾಗ ಅಪರಿಚಿತ ವ್ಯಕ್ತಿಗಳು ತಾರೀಖ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ಇದನ್ನು ಉದ್ದೇಶಿತ ಹತ್ಯೆ ಎಂದು ಕರೆದಿದ್ದಾರೆ. ವಿಧಿ ವಿಜ್ಞಾನ ತಂದ ತಾರೀಖ್‌ನಿಂದ ಮೊಬೈಲ್ ಫೋನ್ ಮತ್ತು ಇತರೇ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ.