ಕಾಣಿಯೂರು : ಮೂತ್ರವಿಸರ್ಜನೆಗೆ ತೆರಳಿದ್ದ ಏಳು ವರ್ಷದ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ಮಾಡಿದ ಘಟನೆ ಕಡಬ ತಾಲೂಕಿನ ಕಾಣಿಯೂರು ಗ್ರಾಮದಿಂದ ವರದಿಯಾಗಿದೆ.
ಆರೋಪಿಯನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗೇಶ ಎಂದು ಗುರುತಿಸಲಾಗಿದೆ.
ಮಹಾರಾಷ್ಟ್ರದ ಕೂಲಿ ಕಾರ್ಮಿರರೋರ್ವರ ಏಳು ವರ್ಷದ ಮಗಳು ಮೂತ್ರವಿಸರ್ಜನೆಗೆ ತೆರಳಿದ್ದ ವೇಳೆ ಈತ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ.ಘಟನೆಯಲ್ಲಿ ಬಾಲಕಿ ರಕ್ತಸ್ರಾವಗೊಂಡು ತೀವ್ರವಾಗಿ ಅಸ್ವಸ್ಥಗೊಂಡಿರುವುದಾಗಿ ತಿಳಿದುಬಂದಿದೆ.
ಬೆಳ್ಳಾರೆ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ನೀಡಿದ್ದಾರೆ.