ಪುತ್ತೂರು: ಇರ್ದೆ ಬೆಂದ್ರ್ ತೀರ್ಥದ ಬಳಿ ಹೊಳೆಯಲ್ಲಿ ಸ್ನಾನಕ್ಕೆಂದು ಬಂದಿದ್ದ ಯುವಕ ಹೃದಯಘಾತದಿಂದ ಮೃತಪಟ್ಟ ಧಾರುಣ ಘಟನೆ ನಡೆದಿದೆ.
ಬೊಳುವಾರಿನ ಗ್ಯಾರೇಜೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಜಿತ್(27.ವ) ಎಂಬ ಯುವಕ ಸ್ಥಳೀಯ ನೆಂಟರೊಬ್ಬರ ಮನೆಗೆ ಬಂದಿದ್ದ ವೇಳೆ ಸ್ನಾನಕ್ಕೆಂದು ಹೊಳೆಗೆ ಇಳಿದಾಗ ಹೃದಯಘಾತವಾಗಿದೆ.
ನೀರಿನಲ್ಲಿ ತೇಲುತ್ತಿದ್ದ ಯುವಕನನ್ನು ತಕ್ಷಣ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.