300 ಅಡಿ ಆಳದ ಕಂದಕಕ್ಕೆ ಬಿದ್ದ ಬಸ್ – 30 ಮಂದಿ ಮೃತ್ಯು, ಅನೇಕರ ಸ್ಥಿತಿ ಗಂಭೀರ

0
103

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಹೊತ್ತ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ 300 ಅಡಿ ಆಳದ ಕಂದಕಕ್ಕೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವತ್ತು ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಬಸ್ಸಿನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದು, ಬಸ್ಸು ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರುಂಗಲ್-ಅಸ್ಸಾರ್ ಬಳಿ ಸಂಚರಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಮಾರು 300 ಅಡಿ ಆಳದ ಕಂದಕಕ್ಕೆ ಬಿದ್ದು ಅವಘಡ ಸಂಭವಿಸಿದೆ.

ಇನ್ನು ಘಟನೆಯಲ್ಲಿ ಮೂವತ್ತು ಮಂದಿ ಮೃತಪಟ್ಟಿದ್ದು ಹತ್ತು ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿದ್ದಾರೆ.

LEAVE A REPLY

Please enter your comment!
Please enter your name here