ಮುಂಬಯಿ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಸೆಮಿಫೈನಲ್ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಅದ್ಭುತ ಹೋರಾಟ ಸಂಘಟಿಸಿ ಜಯ ಸಾಧಿಸಿದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ.
ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ನೀಡಿದ 398 ರನ್ ಗುರಿ ಬೆನ್ನಟ್ಟಿದ ಕಿವೀಸ್ ಗೆ ವೇಗಿ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾದರು. ಮೊದಲ ಎಸೆತದಲ್ಲೇ ಡೆವೊನ್ ಕಾನ್ವೆ (13 ರನ್) ಅವರನ್ನು ವಿಕೆಟ್ ಕೀಪರ್ ರಾಹುಲ್ ಕೈಗೆ ಕ್ಯಾಚಿತ್ತು ನಿರ್ಗಮಿಸುವಂತೆ ಮಾಡಿದರು. ರಚಿನ್ ರವೀಂದ್ರ (13 ರನ್) ಅವರನ್ನು ಮುಂದಿನ ಓವರ್ ನಲ್ಲಿ ಅದೇ ರೀತಿ ರಾಹುಲ್ ಕೈಗೆ ಕ್ಯಾಚಿತ್ತು ಪೆವಿಲಿಯನ್ ಗೆ ಮರಳುವಂತೆ ಮಾಡಿದರು . ಆರಂಭಿಕ ಆಘಾತಕ್ಕೆ ಸಿಲುಕಿದ ಬಳಿಕ ಕೇನ್ ವಿಲಿಯಮ್ಸನ್ (69 ರನ್) ಮತ್ತು ಡೆರಿಲ್ ಮಿಚೆಲ್ ಅಮೋಘ ಜತೆಯಾಟವಾಡಿ ಭಾರತದ ಬೌಲರ್ ಗಳನ್ನು ಕಾಡಿದರು. ಮಿಚೆಲ್ ಅಮೋಘ ಶತಕ ಸಿಡಿಸಿ ಪಂದ್ಯದ ತಿರುವಿನ ಸೂಚನೆ ನೀಡುವಂತೆ ಕಂಡು ಬಂದರು. 119 ಎಸೆತಗಳಲ್ಲಿ 134 ರನ್ ಗಳಿಸಿ ಔಟಾದರು. ಗ್ಲೆನ್ ಫಿಲಿಪ್ಸ್ 41 ರನ್ ಗಳಿಸಿ ಔಟಾದರು.ನಡೆಸಿ ಮಾರ್ಕ್ ಚಾಪ್ಮನ್ 2, ಮಿಚೆಲ್ ಸ್ಯಾಂಟ್ನರ್ 9, ಟ್ರೆಂಟ್ ಬೌಲ್ಟ್ 2, ಲಾಕಿ ಫರ್ಗುಸನ್ 6 ರನ್ ಗಳಿಸಿದರು.
ಭಾರತದ ಬೌಲರ್ ಗಳು ಸ್ವಲ್ಪ ದುಬಾರಿಯಾದರೂ ಶಮಿ ಬಿಗಿ ದಾಳಿ ನಡೆಸಿ 7 ವಿಕೆಟ್ ಕಬಳಿಸಿ ಹೊಸ ದಾಖಲೆ ಬರೆದರು. 9.5 ಓವರ್ ಗಳಲ್ಲಿ 57 ರನ್ ಮಾತ್ರ ಬಿಟ್ಟು ಕೊಟ್ಟರು.
ನ್ಯೂಜಿಲ್ಯಾಂಡ್ 48.5 ಓವರ್ ಗಳಲ್ಲಿ 327 ರನ್ ಗಳನ್ನು ಗಳಿಸಿ ಆಲೌಟಾಯಿತು.ಭಾರತ 70 ರನ್ ಗಳ ಅಮೋಘ ಜಯ ತನ್ನದಾಗಿಸಿಕೊಂಡಿತು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…