ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ ಘೋಷಣೆ

0
105

ಬೆಂಗಳೂರು: ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗಾಗಿ ನಡೆಸುತ್ತಿರುವ ಮಾಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದೆ. ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ನಿರ್ಧಾರ ಮಾಡಲಾಗಿದೆ. ಹೀಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆ ರಾಗಿ ಮಾಲ್ಟ್ ಕೊಡುವ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.

ಮುಂದಿನ ತಿಂಗಳಿಂದ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದೇವೆ. ಒಂದು ಎನ್​ಜಿಒದವರು ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದರು. ಅದು ಯಶಸ್ವಿಯಾಗಿದೆ. ಹೀಗಾಗಿ ಇದನ್ನು ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ. ಕ್ಷೀರಭಾಗ್ಯದ ಹಾಲಿನ ಜೊತೆ ಬೆಳಗ್ಗೆ ರಾಗಿಗಂಜಿ ಕೊಡುವ ನಿರ್ಧಾರ ಕೂಡ ಕೈಗೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

LEAVE A REPLY

Please enter your comment!
Please enter your name here