ಬೆಂಗಳೂರು: ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗಾಗಿ ನಡೆಸುತ್ತಿರುವ ಮಾಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದೆ. ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ನಿರ್ಧಾರ ಮಾಡಲಾಗಿದೆ. ಹೀಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆ ರಾಗಿ ಮಾಲ್ಟ್ ಕೊಡುವ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.
ಮುಂದಿನ ತಿಂಗಳಿಂದ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದೇವೆ. ಒಂದು ಎನ್ಜಿಒದವರು ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದರು. ಅದು ಯಶಸ್ವಿಯಾಗಿದೆ. ಹೀಗಾಗಿ ಇದನ್ನು ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ. ಕ್ಷೀರಭಾಗ್ಯದ ಹಾಲಿನ ಜೊತೆ ಬೆಳಗ್ಗೆ ರಾಗಿಗಂಜಿ ಕೊಡುವ ನಿರ್ಧಾರ ಕೂಡ ಕೈಗೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…