ಕರಾವಳಿ

ನೇಜಾರು ಕೊಲೆ ಪ್ರಕರಣ ; ಆರೋಪಿ ಸ್ಥಳ ಮಹಜರು ವೇಳೆ ಭುಗಿಲೆದ್ದ ಸ್ಥಳೀಯರ ಆಕ್ರೋಶ: ಲಾಠಿ ಚಾರ್ಜ್

ಉಡುಪಿ : ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ಗುರುವಾರ ಮಧ್ಯಾಹ್ನ ಕರೆ ತಂದಾಗ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಉದ್ರಿಕ್ತ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಹತ್ಯೆ ನಡೆದ ಮನೆಗೆ ಬಂಧಿತ ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಪ್ರವೀಣ್‌ ಚೌಗಲೆ (39)ಯನ್ನು ಪೊಲೀಸರು ಸ್ಥಳ ಮಹಜರಿಗೆ ಬಿಗಿ ಭದ್ರತೆಯ ನಡುವೆ ಕರೆತಂದಿದ್ದಾರೆ.

ಈ ವೇಳೆ ಜಮಾಯಿಸಿದ್ದ ಸ್ಥಳೀಯರು ಆಕ್ರೋಶ ಹೊರ ಹಾಕಿ, ಆರೋಪಿಯನ್ನು ನಮಗೊಪ್ಪಿಸಿ ಎಂದು ಘೋಷಣೆ ಕೂಗಿದ್ದಾರೆ. ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ.

ಘಟನೆ ಬೆನ್ನಲ್ಲೇ ಆ ಭಾಗದಲ್ಲಿ ರಸ್ತೆ ತಡೆ ಮಾಡಲಾಯಿತು. ಕೆಲ ಕಾಲ ಟ್ರಾಫಿಕ್ ದಟ್ಟನೆ ಉಂಟಾಯಿತು.ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನೂ ಕೂಡಲೇ ಕರೆಸಿಕೊಳ್ಳಲಾಗಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago