ಪುತ್ತೂರು :ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ನ.17ರಂದು ಬೆಳಿಗ್ಗೆ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ನ.16ರಂದು ರಾತ್ರಿ ಸುಮಾರು 7 ಗಂಟೆಗೆ ಮಠಂದೂರು ಅವರು ಮನೆಯ ಅಂಗಳದಲ್ಲಿ ವಾಕಿಂಗ್ ಹೋಗುತ್ತಿದ್ದ ವೇಳೆ ಕಡಂಬಳ ಹಾವು ಅವರ ಬಲ ಪಾದದ ಬದಿಗೆ ಕಡಿದಿದೆ. ತಕ್ಷಣ ಅವರು ವೈದ್ಯರಿಗೆ ಸಂಪರ್ಕಿಸಿದಾಗ, ವೈದ್ಯರ ಸಲಹೆ ಮೇರೆಗೆ ಅವರು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಮಠಂದೂರು ಅವರಿಗೆ ಡಾ. ಸುರೇಶ್ ಪುತ್ತುರಾಯ ಅವರು ಚಿಕಿತ್ಸೆ ನೀಡಿದ್ದಾರೆ. ಆರಂಭದಲ್ಲಿ ಅವರನ್ನು ಐಸಿಯು ವಿಗೆ ದಾಖಲಿಸಿದ್ದು, ಇಂದು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ರಕ್ತ ಪರೀಕ್ಷೆ ವರದಿಯಲ್ಲಿ ಯಾವುದೇ ವಿಷದ ಅಂಶ ಕಂಡುಬಂದಿಲ್ಲ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಕಾರಣ ನ.17ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದೇನೆ ಎಂದು ಸಂಜೀವ ಮಠಂದೂರು ತಿಳಿಸಿದ್ದಾರೆ.