ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆ ಎನ್‌ಕೌಂಟರ್ ನಡೆಸಿದ್ದು, ಐವರು ಲಷ್ಕರ್ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಐವರು ಭಯೋತ್ಪಾದಕರನ್ನು ಕುಲ್ಗಾಮ್ ಪೋಲೀಸ್, ಸೇನೆ ಮತ್ತು ಸಿಆರ್‌ಪಿಎಫ್ ತಟಸ್ಥಗೊಳಿಸಿದೆ. ಭಯೋತ್ಪಾದಕರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಭಯೋತ್ಪಾದಕರು ತಪ್ಪಿಸಿಕೊಳ್ಳದಂತೆ ಭದ್ರತಾ ಪಡೆ ಪ್ರದೇಶವನ್ನು ಸುತ್ತುವರೆದಿದೆ. ಕುಲ್ಗಾಮ್‌ನ ದಮ್ಹಾಲ್ ಹಂಜಿ ಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಗುರುವಾರ ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ಭದ್ರತಾ ಪಡೆ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಶೋಧ ಕಾರ್ಯಾಚರಣೆ ಗುಂಡಿನ ಚಕಮಕಿಯಾಗಿ ಮಾರ್ಪಟ್ಟಿದೆ. ಕುಲ್ಗಾಮ್‌ನ ನೆಹಮಾ ಪ್ರದೇಶದ ಸಾಮ್ನೋದಲ್ಲಿ ಶುಕ್ರವಾರ ಮುಂಜಾನೆ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…