ನವದೆಹಲಿ : ಡೀಪ್ ಫೇಕ್ ಗಳು ಸಮಾಜದಲ್ಲಿ ಅವ್ಯವಸ್ಥೆಯನ್ನುಂಟು ಮಾಡಬಹುದು. ಹೆಚ್ಚುತ್ತಿರುವ ಸಮಸ್ಯೆಯ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದರು.
ಬಿಜೆಪಿಯ ಪ್ರಧಾನ ಕಛೇರಿಯಲ್ಲಿ ದೀಪಾವಳಿ ಮಿಲನ್ ಕಾರ್ಯಕ್ರಮದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಡೀಪ್ ಫೇಕ್ ಗಳು ಪ್ರಸ್ತುತ ಭಾರತೀಯ ವ್ಯವಸ್ಥೆಯು ಎದುರಿಸುತ್ತಿರುವ ದೊಡ್ಡ ಬೆದರಿಕೆಗಳಲ್ಲಿ ಒಂದಾಗಿದೆ.
ಡೀಪ್ ಫೇಕ್ ಗಳಿಗಾಗಿ ’ಎಐ’ ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಳ್ಳುವಾಗ ನಾಗರಿಕರು ಹಾಗೂ ಮಾಧ್ಯಮಗಳು ಬಹಳ ಜಾಗರೂಕರಾಗಿರಬೇಕು ಎಂದು ಸಲಹೆ ನೀಡಿದರು.