ಮಂಗಳೂರು: ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ
ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ ಅವರ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು.
ನಾನು ಯಾರ ಹೇಳಿಕೆಗೂ ಕಮೆಂಟ್ ಮಾಡೋದಿಲ್ಲ. ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ. ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಎಲ್ಲರ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು ಎಂದು ಹೇಳಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…