ದಾವಣಗೆರೆ: ವಿಷ ಕುಡಿದಿದ್ದ ವ್ಯಕ್ತಿಯನ್ನು ಮಾಯಕೊಂಡ ಶಾಸಕ ಬಸವಂತಪ್ಪ ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ್ದಾರೆ.
ದಾವಣಗೆರೆ ತಾಲೂಕು ಅಣಬೇರು ಗ್ರಾಮದಲ್ಲಿ ಘಟನೆ ನಡೆದಿದ್ದು, ರೇವಣಸಿದ್ದಪ್ಪ (45) ಎಂಬ ವ್ಯಕ್ತಿ ಕುಡಿದ ಮತ್ತಿನಲ್ಲಿ ವಿಷ ಸೇವಿಸಿದ್ದ. ಆತನನ್ನು ಚಿಕಿತ್ಸೆಗೆ ಕರೆದೊಯ್ಯಲು ಅಂಬುಲೆನ್ಸ್‌ಗೆ ಕರೆ ಮಾಡಲಾಗಿತ್ತು. ಆದರೆ 1 ಗಂಟೆ ಕಾದರೂ ಅಂಬುಲೆನ್ಸ್ ಬಾರದ ಹಿನ್ನೆಲೆ ಪಕ್ಕದ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ಬಸವಂತಪ್ಪ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ.
ವಿಷ ಕುಡಿದು 1 ಗಂಟೆಯಿಂದ ನರಳಾಡುತ್ತಿದ್ದ ವ್ಯಕ್ತಿಯ ಸ್ಥಿತಿ ಗಂಭೀರ ಆಗಿದ್ದರಿಂದ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ತಮ್ಮ ಕಾರಿನಲ್ಲಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾವಣಗೆರೆಯ ಸಿಜೆ ಆಸ್ಪತ್ರೆಗೆ ವ್ಯಕ್ತಿಯನ್ನು ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಶಾಸಕರ ಸಮಯಪ್ರಜ್ಞೆಯಿಂದ ಜೀವವೊಂದು ಉಳಿದಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…