ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಆಗಮಿಸುವುದಿಲ್ಲ ಎಂದು ಪುತ್ತೂರು ಕಾಂಗ್ರೆಸ್ ಶಾಸಕ ಮತ್ತು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ರೈ ತಿಳಿಸಿದ್ದಾರೆ.
ಇದು ದೊಡ್ಡ ಕಾರ್ಯಕ್ರಮ ಆಗಿರುವ ಕಾರಣ ಬೇರೆ ಬೇರೆ ಸಂಘಟನೆಯವರು ಬಂದು ಅನೇಕ ಮನವಿ ಮಾಡುತ್ತಾರೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಬಂದು ವೇದಿಕೆಗೆ ಅವರ ಹೆಸರನ್ನು ಇಡಲು ಹೇಳುತ್ತಾರೆ. ಸಿದ್ದಿ ಜನಾಂಗದವರು ಬಂದು ಅವರನ್ನು ಆಹ್ವಾನಿಸುವಂತೆ ಕೇಳಿದ್ದರು. ಆದರೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಮೊನ್ನೆಯೇ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು.
ನವೆಂಬರ್ 25 ಮತ್ತು 26ರಂದು ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆಗೊಂಡಿದೆ. ಕುಸ್ತಿಪಟುಗಳಿಗೆ ನಡೆಯಲಿರುವ ಸನ್ಮಾನ ಕಾರ್ಯಕ್ರಮಕ್ಕೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಿತ್ತು.
ಈ ಪ್ರತಿಭಟನೆಯ ಸಮಯದಲ್ಲಿ ಕಾಂಗ್ರೆಸ್ ಕ್ರೀಡಾಪಟುಗಳ ಪರವಾಗಿ ಮಾತನಾಡಿತ್ತು. ಈಗ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈ ಕಂಬಳಕ್ಕೆ 1 ಕೋಟಿ ರೂ. ಅನುದಾನ ನೀಡುವುದಾಗಿ ಪ್ರಕಟಿಸಿದೆ. ಹೀಗಿರುವಾಗ ಈ ಕಾರ್ಯಕ್ರಮಕ್ಕೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಆಹ್ವಾನಿಸಿದ್ದು ಎಷ್ಟು ಸರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆಯನ್ನು ಜನ ಕೇಳುತ್ತಿದ್ದಾರೆ.
ಗೋವಾದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಕುಸ್ತಿಪಟುಗಳು ಪದಕ ಗೆದ್ದಿದ್ದಾರೆ. ಭಾರತೀಯ ಕುಸ್ತಿ ಫೆಡರೇಶನ್‌ನಿಂದ ವಿಜೇತರನ್ನು ಸಂಸದ ಬ್ರಿಜ್ ಭೂಷಣ್ ಅವರು ಅಭಿನಂದಿಸಲು ಬಯಸಿದ್ದರು. ಸಿದ್ಧಿ ಸಮುದಾಯದ ಬೇಡಿಕೆಯನ್ನಾಧರಿಸಿ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಆರಂಭದಲ್ಲಿ ಸಂಘಟಕರು ಸ್ಪಷ್ಟನೆ ನೀಡಿದ್ದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…