ಜಮ್ಮು ಮತ್ತು ಕಾಶ್ಮೀರ : ಉಗ್ರರೊಂದಿಗೆ ಗುಂಡಿನ ಕಾಳಗದಲ್ಲಿ ಸೇನಾ ಅಧಿಕಾರಿ, ಯೋಧ ಹುತಾತ್ಮ

0
94

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಉಗ್ರರೊಂದಿಗೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ ಇಬ್ಬರು ಭಯೋತ್ಪಾದಕರು ಕಂಡುಬಂದಿದ್ದು ಆ ಬಳಿಕ ಭೀಕರ ಗುಂಡಿನ ಚಕಮಕಿ ಆರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯ ನಂತರ ಧರ್ಮಸಾಲ್‌ನ ಬಾಜಿಮಾಲ್ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ಸೇನೆಯ ಜಂಟಿ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎನ್‌ಕೌಂಟರ್ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಒಬ್ಬ ಅಧಿಕಾರಿ ಮತ್ತು ಯೋಧ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

LEAVE A REPLY

Please enter your comment!
Please enter your name here