ದೇಶ

ನಾವು ಸುಳ್ಳು ಪ್ರಚಾರ ಮಾಡುತ್ತಿದ್ದರೆ ನಮಗೆ ಮರಣ ದಂಡನೆ ವಿಧಿಸಿ: ಬಾಬಾ ರಾಮದೇವ್

ಹೊಸದಿಲ್ಲಿ: ಸುಳ್ಳು ಹಾಗೂ ದಾರಿ ತಪ್ಪಿಸುವ ಜಾಹಿರಾತುಗಳನ್ನು ಪ್ರಸಾರ ಮಾಡುತ್ತಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ಪತಂಜಲಿ ಸಂಸ್ಥೆಗೆ ಎಚ್ಚರಿಕೆ ನೀಡಿದ ಮರುದಿನವೇ, “ಆಧುನಿಕ ವೈದ್ಯಕೀಯ ಪದ್ಧತಿಯ ಕೆಲವು ವೈದ್ಯರ ಗುಂಪು ತಮ್ಮ ಕಂಪನಿಯ ವಿರುದ್ಧ ಸುಳ್ಳು ಕಾರ್ಯಸೂಚಿಯನ್ನು ಪ್ರಚಾರ ಮಾಡುತ್ತಿದೆ” ಎಂದು ಬಾಬಾ ರಾಮದೇವ್ ಆರೋಪಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

Advertisement
Advertisement
Advertisement

ಬುಧವಾರ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಪತಂಜಲಿ ಸಂಸ್ಥೆಯ ಸಹ ಸಂಸ್ಥಾಪಕ ರಾಮದೇವ್, “ವೈದ್ಯರ ಗುಂಪೊಂದು ಯೋಗ, ಆಯುರ್ವೇದ, ಪ್ರಕೃತಿ ಚಿಕಿತ್ಸೆ ಹಾಗೂ ನಮ್ಮ ಸನಾತನ ಮೌಲ್ಯಗಳ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದೆ. ಈ ಸುಳ್ಳು ಕಾರ್ಯಸೂಚಿಯು ರಕ್ತದೊತ್ತಡ, ಮಧುಮೇಹ, ಅಸ್ತಮಾ, ಕೀಲು ನೋವು, ಯಕೃತ್ತು ಕಾಯಿಲೆ, ಮೂತ್ರಪಿಂಡ ವೈಫಲ್ಯ ಇನ್ನಿತರ ಕಾಯಿಲೆಗಳಿಗೆ ರಾಸಾಯಿಕ ಜಗತ್ತಿನಲ್ಲಿ ಪರಿಹಾರವೇ ಇಲ್ಲ ಎಂದು ಪ್ರತಿಪಾದಿಸುತ್ತಿದೆ” ಎಂದು ಆರೋಪಿಸಿದರು.

ಜನರನ್ನು ಪತಂಜಲಿ ಔಷಧಗಳ ಮೂಲಕ ಗುಣಪಡಿಸಿರುವುದಕ್ಕೆ ನಮ್ಮ ಕಂಪನಿಯ ಬಳಿ ಸಮರ್ಥನೀಯ ನೈಜ ಜಗತ್ತು ಹಾಗೂ ವೈಜ್ಞಾನಿಕ ಪುರಾವೆಗಳಿವೆ ಎಂದು ಬಾಬಾ ರಾಮದೇವ್ ಪ್ರತಿಪಾದಿಸಿದರು.

“ನಾವು ಯೋಗ, ಆಯುರ್ವೇದ ಹಾಗೂ ಪ್ರಕೃತಿ ಚಿಕಿತ್ಸೆಯಲ್ಲಿ ಸಮಗ್ರ ಹಾಗೂ ಪುರಾವೆ ಆಧಾರಿತ ಚಿಕಿತ್ಸಾ ವ್ಯವಸ್ಥೆಗಳ ಮೂಲಕ ಟೈಪ್ 1 ಮಧುಮೇಹ, ಥೈರಾಯ್ಡ್ ಸಮಸ್ಯೆ, ಅತಿ ರಕ್ತದೊತ್ತಡ, ಸಕ್ಕರೆ ಪ್ರಮಾಣವನ್ನು ಸಹಜಗೊಳಿಸುವುದು, ಸ್ಥೂಲಕಾಯ ಹಾಗೂ ಇನ್ನಿತರ ಕಾಯಿಲೆಗಳನ್ನು ಗುಣ ಪಡಿಸುತ್ತೇವೆ. ಇದು ಸುಳ್ಳಲ್ಲ; ನಿಜ” ಎಂದು ರಾಮದೇವ್ ವಾದಿಸಿದರು.

“ಒಂದು ವೇಳೆ ನಾವೇನಾದರೂ ಸುಳ್ಳು ಪ್ರಚಾರ ಮಾಡುತ್ತಿದ್ದರೆ ನಮ್ಮ ವಿರುದ್ಧ ಗರಿಷ್ಠ ಶಿಕ್ಷೆಯನ್ನು ವಿಧಿಸಿ. ಮರಣ ದಂಡನೆಯನ್ನು ನೀಡಿ. ನಮಗೆ ಅದರ ಬಗ್ಗೆ ಸಮ್ಮತಿಯಿದೆ” ಎಂದೂ ಅವರು ಹೇಳಿದರು.

ತಮ್ಮ ಸಂಸ್ಥೆಯ ವಿರುದ್ಧ ಸುಳ್ಳು ಪ್ರಚಾರದಲ್ಲಿ ತೊಡಗಿರುವವರ ವಿರುದ್ಧ ಪ್ರಾಧಿಕಾರಗಳು ಕಾನೂನು ಕ್ರಮ ಜರುಗಿಸಬೇಕು ಎಂದೂ ಅವರು ಆಗ್ರಹಿಸಿದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago