ಕರಾವಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ಕಂಬಳದ ಆಮಂತ್ರಣ ಪತ್ರಿಕೆ ನೀಡಿ ಅಶೋಕ್ ಕುಮಾರ್ ರೈಯವರಿಂದ ಆಹ್ವಾನ

ಬೆಂಗಳೂರು :ನವೆಂಬರ್ 25,26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ನಮ್ಮ ಕಂಬಳ ಬೆಂಗಳೂರು ಕಂಬಳದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶಾಸಕ ಹಾಗೂ ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಅಶೋಕ್. ಕುಮಾರ್ ರೈ ಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಮಂತ್ರಣ ಪತ್ರ ನೀಡಿ ಅಹ್ವಾನ ನೀಡಿದರು.

Advertisement
Advertisement
Advertisement

ಸಿದ್ಧರಾಮಯ್ಯರವರು 25ರಂದು ಸಂಜೆ ನಡೆಯುವ ಮುಖ್ಯ ಸಭಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.

ಬೆಂಗಳೂರುರಿನಲ್ಲಿ ನಡೆಯುತ್ತಿರುವ ಕಂಬಳದ ಬಗ್ಗೆ, ಕಂಬಳಕ್ಕೆ ಬರುವ ಅತಿಥಿಗಳು ಹಾಗೂ ಭಾಗವಹಿಸುವ ಲಕ್ಷಾಂತರ ಕಂಬಳಾಭಿಮಾನಿಗಳ ಕುರಿತು ಸಿಎಂ ಅವರಿಗೆ ಅಶೋಕ್ ರೈ ಯವರು ವಿವರಣೆ ನೀಡಿದರು.

ಕರ್ನಾಟಕದ ಇತಿಹಾಸದಲ್ಲೇ ರಾಜ್ಯದ ರಾಜಧಾನಿಯಲ್ಲಿ ತುಳುನಾಡಿನ ಜನಪದ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಿದ್ದಕ್ಕಾಗಿ ಸಿಎಂ ಸಿದ್ದರಾಮಯ್ಯರವರು ಅಶೋಕ್ ರೈಯವರನ್ನು ಅಭಿನಂದಿಸಿದರು.

ನನಗೆ ಕಂಬಳವನ್ನು ವೀಕ್ಷಿಸಬೇಕು. ಕರಾವಳಿಯ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡುವ ಮೂಲಕ ರಾಜಧಾನಿಯಲ್ಲಿರುವ ಎಲ್ಲಾ ಜನತೆಗೂ, ದೇಶ – ವಿದೇಶದವರಿಗೂ ಕಂಬಳವನ್ನು ನೋಡುವ ಯೋಗ ದೊರಕಿದೆ.

ಸರಕಾರದ ಪೂರ್ಣ ಪ್ರಮಾಣದ ಬೆಂಬಲವನ್ನು ಈ ಸಂದರ್ಭದಲ್ಲಿ ಸಿಎಂ ಘೋಷಿಸಿದರು.

ಕಂಬಳಕ್ಕೆ ಪೇಟಾದವರ ಆಕ್ಷೇಪ ಇದ್ದ ಸಂದರ್ಭದಲ್ಲಿ ಅಂದು ಸಿಎಂ ಆಗಿದ್ದ ನೀವು ನಮ್ಮ ಹೋರಾಟಕ್ಕೆ ಸಹಾಯ ಮಾಡಿದ್ದೀರಿ ಎಂದು ಸಿಎಂ ಬಳಿ ಅಶೋಕ್ ರೈ ನೆನಪಿಸಿದರು.

ಈ ಸಂದರ್ಭದಲ್ಲಿ. ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಗುರುಕಿರಣ್ ಮತ್ತು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago