ದೇಶ

350 ರೂ.ಗಾಗಿ ಯುವಕನ ಕತ್ತು ಕೊಯ್ದು ಕೊಲೆ

ನವದೆಹಲಿ: 350 ರೂ.ಗಾಗಿ 16 ವರ್ಷದ ಹುಡುಗನೊಬ್ಬ 18 ವರ್ಷದ ಯುವಕನ ಕತ್ತು ಕೊಯ್ತು ಭೀಕರವಾಗಿ ಕೊಲೆ ಮಾಡಿರುವ ಘಟನೆ ದೆಹಲಿಯ ಕಾಲೊನಿಯೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಹುಡುಗ ಅದೇ ಶವದ ಮೇಲೆ ನೃತ್ಯಮಾಡಿ ವಿಕೃತಿ ಮೆರೆದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Advertisement
Advertisement
Advertisement

ಈಶಾನ್ಯ ದೆಹಲಿಯ ಪ್ರದೇಶದ ಕಾಲೊನಿಯೊಂದರಲ್ಲಿ ಕೊಲೆ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ಹುಡುಗ 18ರ ಯುವಕನಿಗೆ 60ಕ್ಕೂ ಹೆಚ್ಚು ಬಾರಿ ಇರಿದು ಕೊಂದಿದ್ದಾನೆ, ನಂತರ ಶವದ ಮೇಲೆ ನಿಂತು ನೃತ್ಯ ಮಾಡಿ ವಿಕೃತಿ ಮೆರೆದಿದ್ದಾನೆ.

ಪೊಲೀಸರ ಮಾಹಿತಿ ಪ್ರಕಾರ, ಹುಡುಗ ಕಳ್ಳತನ ಮಾಡುವ ಉದ್ದೇಶದಿಂದ ಆ ಪ್ರದೇಶಕ್ಕೆ ಬಂದಿದ್ದ. ಅದಕ್ಕಾಗಿ ಮೊದಲು ಯುವಕನ ಕತ್ತು ಹಿಸುಕಿ ಪ್ರಜ್ಞೆ ತಪ್ಪಿಸಿದ್ದಾನೆ. ನಂತರ ಆತನ ಬಳಿಯಿದ್ದ ಹಣವನ್ನು ದೋಚಿ, ಅನೇಕ ಬಾರಿ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಒಂದು ಕಿರಿದಾದ ರಸ್ತೆಗೆ ಶವವನ್ನ ಎಳೆದುಕೊಂಡು ಹೋಗಿದ್ದಾನೆ. ಅವನು ಸತ್ತಿದ್ದಾನೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಪದೇ ಪದೆ ಕುತ್ತಿಗೆಯನ್ನು ಕೊಯ್ದಿದ್ದಾನೆ. ಅಷ್ಟಕ್ಕೇ ನಿಲ್ಲದ ಕ್ರೌರ್ಯ ಆತನ ತಲೆಯನ್ನ ಒದ್ದು, ಶವದ ಮೇಲೆ ನಿಂತು ಕುಣಿದಾಡಿದ್ದಾನೆ. ಈ ಭೀಕರ ದೃಶ್ಯಗಳೆಲ್ಲವೂ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಹೇಳಿದ್ದಾರೆ.

ಮಂಗಳವಾರ ರಾತ್ರಿ 11:15ರ ವೇಳೆಗೆ ಕೃತ್ಯ ನಡೆದಿತ್ತು. ಜಂತಾ ಮಜ್ದೂರ್ ಕಾಲೋನಿಯಲ್ಲಿ ಕಳ್ಳತನ ಮಾಡುವ ಉದ್ದೇಶದಿಂದ 18 ವರ್ಷದ ಯುವಕನ ಕೊಲೆಯಾಗಿರುವ ಬಗ್ಗೆ ಕಂಟ್ರೋಲ್‌ ರೂಮ್‌ಗೆ ಕರೆ ಬಂದ ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಯುವಕನನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ, ಅದಕ್ಕೂ ಮುನ್ನವೇ ಯುವಕ ಮೃತಪಟ್ಟಿರುವುದು ತಿಳಿದು ಬಂದಿತು ಎಂದು ಪೊಲೀಸ್ ಉಪ ಆಯುಕ್ತ ಜಾಯ್ ಟಿರ್ಕಿ ಹೇಳಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago