ನವದೆಹಲಿ: ಭಾರತದ ಸರ್ವೋಚ್ಚ ನ್ಯಾಯಾಲಯಕ್ಕೆ ನೇಮಕಗೊಂಡ ಮೊದಲ ಮಹಿಳಾ ನ್ಯಾಯಾಧೀಶರಾದ ಜಸ್ಟಿಸ್ ಎಂ. ಫಾತಿಮಾ ಬೀವಿ ಅವರು ಗುರುವಾರ ನಿಧನಹೊಂದಿದರು. ಅವರಿಗೆ 96 ವರ್ಷ ವಯಸ್ಸಾಗಿತ್ತು.
ಮೂರು ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಕೊಲ್ಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ನಿಧನ ಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇವರು ದೇಶದ ಉನ್ನತ ನ್ಯಾಯಾಂಗಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಮಹಿಳೆಯೂ ಕೂಡ ಆಗಿದ್ದರು.