ದೇಶ

ಉತ್ತರಕಾಶಿ ಸುರಂಗದಲ್ಲಿ ಸಿಲುಕಿದವರ ರಕ್ಷಣೆ ತಾಂತ್ರಿಕ ಅಡಚಣೆಯಿಂದಾಗಿ ವಿಳಂಬ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯಲ್ಲಿ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಇಂದಿಗೆ 13ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ತಡರಾತ್ರಿ ತಾಂತ್ರಿಕ ಅಡಚಣೆಯಿಂದಾಗಿ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ವಿಳಂಬವಾಗಿದೆ.

Advertisement
Advertisement
Advertisement

ಸಿಲ್ಕ್ಯಾರಾ ಸುರಂಗದ ಕಡೆಯಿಂದ ಅಮೆರಿಕನ್ ಆಗುರ್ ಯಂತ್ರವನ್ನು ಬಳಸಿ ಕೊರೆಯುವ ಕೆಲಸ ನಡೆಯುತ್ತಿತ್ತು. ರಕ್ಷಣಾ ತಂಡ ಇಲ್ಲಿಯವರೆಗೆ ಸುಮಾರು 46.8 ಮೀ. ವರೆಗೆ ಕೊರೆದಿದ್ದಾರೆ. ಆದರೆ ಗುರುವಾರ ತಡರಾತ್ರಿ ಮತ್ತೊಂದು ತಾಂತ್ರಿಕ ಅಡಚಣೆ ಉಂಟಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಕೊರೆಯುವ ಯಂತ್ರವನ್ನು ದುರಸ್ತಿಗೊಳಿಸಲು ಕೆಲವು ಗಂಟೆ ತೆಗೆದುಕೊಳ್ಳುತ್ತದೆ. ಬೇರೆ ಯಾವುದೇ ಸಮಸ್ಯೆ ಉಂಟಾಗದಿದ್ದರೆ ಶುಕ್ರವಾರ ರಕ್ಷಣಾ ಕಾರ್ಯಾಚರಣೆ ಪುನರಾರಂಭವಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

13 ದಿನಗಳಿಂದ ಸುರಂಗದೊಳಗೆ ಸಿಲುಕಿ ಪರದಾಡುತ್ತಿರುವ 41 ಕಾರ್ಮಿಕರನ್ನು ಇಂದು ಹೊರತರುವ ನಿರೀಕ್ಷೆಯಿದೆ. ಅಂಬುಲೆನ್ಸ್‌ಗಳು, ವೈದ್ಯರ ತಂಡ ಅಗತ್ಯವಿರುವ ಎಲ್ಲಾ ವೈದ್ಯಕೀಯ ಉಪಕರಣಗಳೊಂದಿಗೆ ಸ್ಥಳದಲ್ಲಿ ಹಾಜರಿದ್ದಾರೆ. ಕಾರ್ಮಿಕರಿಗೆ ನೀರು, ಆಹಾರ ವಿತರಿಸಲು ಪೈಪ್ ಅನ್ನು ಅಳವಡಿಸಲಾಗಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago