ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ಮಧ್ಯೆ ಬಿಸಿರೋಡಿನಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿ ಕೊನೆಗೂ ಟ್ರಾಫಿಕ್ ಪೊಲೀಸರ ಕೈ ಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.
ಗಿರಿಯಪ್ಪ ಮೂಲ್ಯ ಜಾರಂದಗುಡ್ಡೆ ಎಂಬವರ ಸ್ಕೂಟರ್ ಗೆ ಐಶರ್ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕುಂಜೆ ಕ್ರಾಸ್ ರಸ್ತೆಯಲ್ಲಿ ಢಿಕ್ಕಿ ಹೊಡೆದಿದೆ.ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಪಲ್ಟಿಯಾಗಿ ಸವಾರ ಗಿರಿಯಪ್ಪ ಅವರಿಗೆ ಗಾಯವಾಗಿದ್ದು,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿ ಹೊಡೆದ ಲಾರಿ ಚಾಲಕ ಸಾರ್ವಜನಿಕರು ನೋಡುತ್ತಿದ್ದಂತೆ ಅಲ್ಲಿಂದ ಲಾರಿ ಸಮೇತ ಎಸ್ಕೇಪ್ ಆಗಿದ್ದಾನೆ. ಆದರೆ ಬಿಸಿರೋಡಿನ ಪಾಯಿಂಟ್ ನಲ್ಲಿ ಕರ್ತವ್ಯ ಮಾಡುತ್ತಿದ್ದ ಟ್ರಾಫಿಕ್ ಸಿಬ್ಬಂದಿ ರಾಜು ಪೂಜಾರಿ ಅವರ ಗಮನಕ್ಕೆ ಸಾರ್ವಜನಿಕರು ಅಪಘಾತದ ವಿಚಾರ ತಿಳಿಸುತ್ತಿದ್ದಂತೆ ಲಾರಿಯನ್ನು ಬೆನ್ನಟ್ಟಿ ಬಂಟ್ವಾಳದ ಬಸ್ತಿಪಡ್ಪು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಯ ಕುರಿತು ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…