ಬೆಂಗಳೂರು ಕಂಬಳದಲ್ಲಿ ಸ್ಥಳೀಯರಿಗೆ ಅರ್ಥವಾಗುವಂತೆ ಕನ್ನಡದಲ್ಲಿ ವೀಕ್ಷಕ ವಿವರಣೆ

By: Ommnews

Date:

Share post:

ಬೆಂಗಳೂರು: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ನಡೆಸಲು ಸಕಲ ಸಿದ್ದತೆ ನಡೆಸಲಾಗಿದ್ದು, ಎರಡು ದಿನಗಳ ಕಾಲ ಅತ್ಯಂತ ಯಶಸ್ವಿಯಾಗಿ ಕೂಟ ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Advertisement
Advertisement
Advertisement

ಅರಮನೆ ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಂಬಳ ಕೂಟಕ್ಕೆ ಏಳರಿಂದ ಎಂಟು ಲಕ್ಷ ಜನರು ಸೇರುವ ನಿರೀಕ್ಷೆಯಿದೆ.ವಿಶಾಲ ಪಾರ್ಕಿಂಗ್, ಸ್ವಯಂ ಸೇವಕರು ಸೇರಿ ಎಲ್ಲಾ ಸಿದ್ದತೆ ಮಾಡಲಾಗಿದೆ ಎಂದರು.

ಕಂಬಳ ನಡೆಯುವ ಅರಮನೆ ಮೈದಾನಕ್ಕೆ ಜನರು ಬರಲು ಸುಲಭವಾಗುವಂತೆ 150 ಹೆಚ್ಚುವರಿ ಬಸ್ ಗಳನ್ನು ಈ ಮಾರ್ಗಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ರಾಜ್ಯದ ಇತಿಹಾಸದಲ್ಲಿ ಮೈಲಿಗಲ್ಲಿನ ಕ್ಷಣಕ್ಕೆ ಬೆಂಗಳೂರು ಸಾಕ್ಷಿಯಾಗುತ್ತಿದೆ. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ನಡೆಯಲಿದ್ದು, ರಾಜ್ಯದ ಅತ್ಯಂತ ಯಶಸ್ವಿ ಕಾರ್ಯಕ್ರಮಗಳಲ್ಲಿ ಒಂದಾಗಲಿದೆ ಎಂದು ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಹೇಳಿದರು.

27 ಏಕರೆ ಜಾಗದಲ್ಲಿ ಬೃಹತ್ ಕೂಟ ಆಯೋಜನೆಗೆ ಸಿದ್ದತೆ ನಡೆಸಲಾಗಿದೆ. ಕಂಬಳದ ಜೊತೆಗೆ ನಿರಂತರವಾಗಿ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿದೆ. ಕರಾವಳಿಯ ಯಕ್ಷಗಾನ, ಹುಲಿ ಕುಣಿತ ಮುಂತಾದ ಕಲೆಗಳ ಪ್ರದರ್ಶನ ನಡೆಯಲಿದೆ. ಅಲ್ಲದೆ ಖ್ಯಾತ ಕಲಾವಿದರ ಸಂಗೀತ ಸಂಜೆ ನಡೆಯಲಿದೆ ಎಂದರು.

ಬೆಂಗಳೂರು ಕಂಬಳದಲ್ಲಿ ಸ್ಥಳೀಯರಿಗೆ ಅರ್ಥವಾಗುವಂತೆ ಕನ್ನಡದಲ್ಲಿ ವೀಕ್ಷಕ ವಿವರಣೆ ಇರಲಿದೆ ಎಂದರು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section