ಕರಾವಳಿ

ತಲವಾರಿನಿಂದ ದಾಳಿ ಮಾಡಿ ಅಡಿಕೆ ಕಳ್ಳತನಕ್ಕೆ ಯತ್ನ

ಸವಣೂರು : ಸವಣೂರಿನ ಎಡಪತ್ಯ ಫಾರ್ಮ್ ಒಂದರಿಂದ ಅಡಿಕೆ ಕಳ್ಳತನಕ್ಕೆ ಇಬ್ಬರ ತಂಡ ವಾಹನದಲ್ಲಿ ಬಂದಿದ್ದು ಅಡಿಕೆ ದೋಚುವ ಸಂದರ್ಭದಲ್ಲಿ ಫಾರ್ಮ್ ಮಾಲಕನ ಪುತ್ರನ ಕೈಗೆ ಸಿಕ್ಕಿಬಿದ್ದ ಸಂದರ್ಭ ಅರೋಪಿಗಳು ತಲವಾರು ದಾಳಿಗೆ ಯತ್ನಿಸಿದ ಘಟನೆ ನಡೆದಿದೆ.

Advertisement
Advertisement
Advertisement

ಎಡಪತ್ಯ ಫಾರ್ಮ್ ಮಾಲಕ ರಾಮಚಂದ್ರ ಎಡಪತ್ಯ ಅವರ ಪುತ್ರ ನಿಷ್ಕಲ್‌ ರಾಮ್‌ ಎಡಪತ್ಯ ತಲವಾರು ದಾಳಿಗೆ ಒಳಗಾದವರು. ದಾಳಿಯ ವೇಳೆ ಕೈಗೆ ಗಾಯವಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶನಿವಾರ ಬೆಳಗ್ಗಿನ ಜಾವ ನಿಷ್ಕಲ್‌ ಅವರು ಮೈಸೂರಿನಿಂದ ಬರುವ ಸಂದರ್ಭದಲ್ಲಿ ಅಡಿಕೆ ಒಣಹಾಕಿದ ಸೋಲಾರ್‌ಗೂಡಿನಿಂದ ಕಾರಿಗೆ ಅಡಿಕೆ ತುಂಬುತ್ತಿರುವುದು ಕಂಡು ಬಂದಿದ್ದು, ಇದನ್ನು ಅವರು ಪ್ರಶ್ನಿಸಿದರು. ಈ ವೇಳೆ ಕಳ್ಳರು ಬೆದರಿಕೆ ಹಾಕಿದರಲ್ಲದೇ ತಲವಾರಿನಿಂದ ದಾಳಿ ಮಾಡಿದ್ದು, ಕೈಗೆ ಕೈಗೆ ಗಾಯವಾಗಿದೆ. ಈ ವೇಳೆ ಅವರು ಕಿರುಚಿದ್ದರಿಂದ ಮನೆಯವರು ಅಲ್ಲಿಗೆ ಬಂದು ಕಳ್ಳರಲ್ಲಿ ಓರ್ವನನ್ನು ಹಿಡಿದಿಡುವಲ್ಲಿ ಯಶಸ್ವಿಯಾಗಿದ್ದಾರೆ.

ಬಶೀರ್‌ ಸಿಕ್ಕಿಬಿದ್ದ ಕಳ್ಳ. ಕಳೆದ ಹಲವು ದಿನಗಳಿಂದ ನಿರಂತರ ಅಡಿಕೆ ಕಳ್ಳತನ ಮಾಡುತ್ತಿರುವುದನ್ನು ಒಪ್ಪಿಕೊಂಡಿರುವ ಬಶೀರ್‌, ಸುಮಾರು 5 ಲಕ್ಷ ರೂ.ಗಳಿಗೂ ಅಧಿಕ ಮೊತ್ತದ ಅಡಿಕೆಯನ್ನು ಸುಲಿದಿಟ್ಟ ಗೋದಾಮು ಹಾಗೂ ಸೋಲಾರ್‌ಕೊಠಡಿಯಿಂದ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಇನ್ನೋರ್ವ ಕಳ್ಳ ಹಕೀಂನ ಸೂಚನೆಯ ಮೇರೆಗೆ ಇಲ್ಲಿಗೆ ಆಗಮಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವೀಡಿಯೋದಲ್ಲಿ ಕಳ್ಳ ಒಪ್ಪಿಕೊಂಡಿದ್ದಾನೆ. ಇರ್ಷಾದ್‌ ಎಂಬವರಿಗೆ ಸೇರಿದ ಕಾರಿನಲ್ಲಿ ಕಳ್ಳರು ಬಂದಿದ್ದು, ಬಶೀರ್‌ನನ್ನು ಫಾರ್ಮ್ ಮಾಲಕರು ಬೆಳ್ಳಾರೆ ಠಾಣೆಗೆ ಒಪ್ಪಿಸಿದ್ದಾರೆ

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago