ಕ್ರೀಡಾ ಕೂಟದಲ್ಲಿ ಬಹುಮಾನ ಸಿಗಲಿಲ್ಲವೆಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

0
102

ಪುತ್ತೂರು : ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ ನಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ನಿಶಾ ಬಿ ಎಮ್ ರವರು ಪುತ್ತೂರು ನಗರರ ಖಾಸಗಿ ಕಾಲೇಜಿನ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ (ಓಟ ಸ್ಪರ್ಧೆ) ಭಾಗವಹಿಸಿ ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದವರು ಬೇಸರದಲ್ಲಿದ್ದು ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, ಇದರಿಂದ ಅಸ್ವಸ್ಥಳಾದವಳನ್ನು ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬಿಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದಾಳೆ.

ನಂತರ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ನಿಶಾನನ್ನು ಪರೀಕ್ಷಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ನ.25 ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಶಾ ಬಿ ಎಮ್ ರವರು ಮೃತಪಟ್ಟಿದ್ದು, ಸದ್ರಿ ಮರಣದಲ್ಲಿ ಬೇರೆ ಯಾವುದೇ ಸಂಶಯವಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ನಿಶಾ ಅವರ ಸಹೋದರ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here