ಉದ್ಯೋಗ ಮಾಹಿತಿ

4 ಜಿಲ್ಲಾ ನ್ಯಾಯಾಲಯದಲ್ಲಿದೆ ಜವಾನ, ಟೈಪಿಸ್ಟ್​​ ಸೇರಿದಂತೆ ಹಲವು ಹುದ್ದೆಗಳು

ರಾಯಚೂರು, ಬೀದರ್​, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement
Advertisement

ಈ ನಾಲ್ಕು ಜಿಲ್ಲೆಗಳಲ್ಲಿ ಜವಾನ, ಟೈಪಿಸ್ಟ್, ಸ್ಟೆನೋಗ್ರಾಫರ್​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ: ಇಲ್ಲಿ ಒಟ್ಟು 54 ಹುದ್ದೆಗಳು ಖಾಲಿ ಇವೆ. ಶೀಘ್ರ ಲಿಪಿಗಾರ ಹುದ್ದೆ 10, ಬೆರಳಚ್ಚುಗಾರ ಹುದ್ದೆ 6, ಬೆರಳಚ್ಚು-ನಕಲುಗಾರ ಹುದ್ದೆ- 2, ಜವಾನ ಹುದ್ದೆಗಳು -36

ಬೀದರ್​ ಜಿಲ್ಲಾ ನ್ಯಾಯಾಲಯ: ಇಲ್ಲಿ 9 ಶೀಘ್ರ ಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕೊಡಗು ಜಿಲ್ಲಾ ನ್ಯಾಯಾಲಯ: ಇಲ್ಲಿ ಒಟ್ಟು 64 ಹುದ್ದೆಗಳು ಖಾಲಿ ಇವೆ. ಸ್ಟೆನೋಗ್ರಾಫರ್​​ 2, ಟೈಪಿಸ್ಟ್​​ 17, ಟೈಪಿಸ್ಟ್​- ಕಾಪಿಸ್ಟ್​​ 7, ಪ್ರೊಸೆಸ್​ ಸರ್ವರ್​ 8, ಜವಾನ 30.

ರಾಯಚೂರು ಜಿಲ್ಲಾ ನ್ಯಾಯಾಲಯ: ಸ್ಟೆನೋಗ್ರಾಫರ್ ಗ್ರೇಡ್​ 3 – 1, ಟೈಪಿಸ್ಟ್​​ – 8, ಟೈಪಿಸ್ಟ್​- ಕಾಪಿಸ್ಟ್ – ​ 1, ಪ್ರೊಸೆಸ್​ ಸರ್ವರ್​​ – 5, ಜವಾನ – 10, ಚಾಲಕ – 1

ವಿದ್ಯಾರ್ಹತೆ:ಜವಾನ, ಚಾಲಕರ ಹುದ್ದೆ ಹೊರಾತಾಗಿ ಉಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಪರೀಕ್ಷೆಯಲ್ಲಿ ಟೈಪಿಂಗ್​ ಮತ್ತು ಶೀಘ್ರ ಲಿಪಿಗಾರ ಪರೀಕ್ಷೆಯಲ್ಲಿ ಸೀನಿಯರ್​​​ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜವಾನ ಮತ್ತು ಚಾಲಕರ ಹುದ್ದೆಗೆ 10ನೇ ಪರೀಕ್ಷೆ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಟೈಪಿಂಗ್​ ಪರೀಕ್ಷೆ, ಕಂಪ್ಯೂಟರ್​ ಸಾಕ್ಷರತೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕಿದೆ. ನಿಗದಿತ ನ್ಯಾಯಾಲಯದ ಅಧಿಸೂಚನೆಯಲ್ಲಿ ಉಲ್ಲೇಖಿಸಿರುವಂತೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಡಿಸೆಂಬರ್​ 5 ಕಡೆಯ ದಿನವಾದರೆ, ಕೊಡುಗು ಜಿಲ್ಲಾ ನ್ಯಾಯಾಲಯದ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಡಿಸೆಂಬರ್​ 10, ಬೀದರ್​​, ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 6 ಆಗಿದ್ದು, ರಾಯಚೂರು ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 21 ಆಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಕೆಳಗಿನ ಜಾಲತಾಣಗಳಿಗೆ ಭೇಟಿ ನೀಡಬಹುದಾಗಿದೆ.

ರಾಯಚೂರು: raichur.dcourts.gov.in

ಕೊಡಗು:kodagu.dcourts.gov.in/notice-category/recruitments/

ಬೀದರ್​:bidar.dcourts.gov.in

ದಕ್ಷಿಣ ಕನ್ನಡ: dk.dcourts.gov.in

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago