ಸುಳ್ಯ : ಸುಳ್ಯ ಸಮೀಪದ ಅರಂಬೂರಿನ ಹೊಳೆಯಲ್ಲಿ ನಾಪತ್ತೆಯಾಗಿದ್ದ ಮಡಿಕೇರಿ ಮೂಲದ ವ್ಯಕ್ತಿಯು ಶವವಾಗಿ ಪತ್ತೆಯಾಗಿದ್ದಾರೆ.
ಅರಂಬೂರು ಅಯ್ಯಪ್ಪ ಮಾಲಾಧಾರಿಗಳ ಜೊತೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಎರಡನೇ ಮಣ್ಣಗೇರಿಯ ನಿವಾಸಿಯಾಗಿರುವ ವೆಂಕಟರಮಣ ಎಂಬವರು ಹೊಳೆಯಲ್ಲಿ ನಾಪತ್ತೆಯಾಗಿದ್ದರು.
ಇವರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಅಂತಿಮವಾಗಿ ಪೈಚಾರ್ ನ ಮುಳುಗು ತಜ್ಞರ ತಂಡ ಆಗಮಿಸಿದ್ದಾರೆ. ಮುಳುಗಿದ್ದ ವ್ಯಕ್ತಿಯ ಮೃತದೇಹವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆಂದು ತಿಳಿದು ಬಂದಿದೆ.