ಬೆಳಗಾವಿ: ಮೈಸೂರು ದಸರಾ ಖ್ಯಾತಿಯ ಅರ್ಜುನ ಆನೆ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಗರಂ ಆಗಿದ್ದಾರೆ.
ಪರಿಷತ್ ಕಲಾಪದ ವೇಳೆ ಮಾತನಾಡಿದ ಅವರು, 60 ವರ್ಷ ಮೀರಿದ ಅನೆಯನ್ನ ಕಾರ್ಯಾಚರಣೆಗೆ ಬಳಕೆ ಮಾಡಬಾರದು ಅಂತ ನಿಯಮ ಇತ್ತು. ಈಗ ಅರ್ಜುನ ಆನೆಗೆ 64 ವರ್ಷ. ಕಾಡಾನೆ ಸೆರೆ ಹಿಡಿಯಲು ಯಾಕೆ ಉಪಯೋಗ ಮಾಡಿದ್ರು ಎಂದು ಪ್ರಶ್ನಿಸಿದ್ದಾರೆ.
ಇದೊಂದು ಆತಂಕದ ವಿಚಾರ. ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು. ಅರವಳಿಕೆ ಪುಂಡಾನೆಗೆ ಬದಲು ಅರ್ಜುನಿಗೆ ಬಿತ್ತು ಅಂತ ಆರೋಪ ಇದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಅರ್ಜುನ ಆನೆ ಸಾವಿನ ಬಗ್ಗೆ ಸ್ಥಳದಲ್ಲೇ ಇದ್ದ ಮಾವುತರು ಮತ್ತು ಕಾವಾಡಿಗರು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅರವಳಿಕೆ ಕಾಡಾನೆಗೆ ತಾಗುವ ಬದಲು ಅರ್ಜುನನಿಗೆ ತುಗಲಿತ್ತು ಎಂದು ಆರೋಪಿಸಿದ್ದಾರೆ.