ಬೆಂಗಳೂರು : ಹೋಟೆಲ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವರಿಗೆ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡುಸುವುದಾಗಿ ನಂಬಿಸಿ, ಹಣ ಪಡೆದು ವಂಚಿಸಿದ್ದ ಆರೋಪದ ಅಡಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬಿಡುಗಡೆಯಾದರು.
ಈ ಪ್ರಕರಣದಲ್ಲಿ ಚೈತ್ರಾ ಹಾಗೂ ಶ್ರೀಕಾಂತ್‌ಗೆ ಎರಡು ದಿನಗಳ ಹಿಂದೆ ನ್ಯಾಯಾಲಯವು ಜಾಮೀನು ನೀಡಿತ್ತು. ಚೈತ್ರಾ ಪರ ವಕೀಲರು ಕಾರಾಗೃಹದ ಅಧಿಕಾರಿಗಳಿಗೆ ನ್ಯಾಯಾಲಯದ ಆದೇಶ ನೀಡಿದರು. ಬಳಿಕ ಕಾರಾಗೃಹದ ಸಿಬ್ಬಂದಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ, ಬುಧವಾರ ರಾತ್ರಿ ಬಿಡುಗಡೆ ಮಾಡಿದರು.